1ನೇ ಟೆಸ್ಟ್: ಪ್ರಥಮ ಇನ್ನಿಂಗ್ಸ್‌ನಲ್ಲಿ ಇಂಗ್ಲೆಂಡ್ 3 ವಿಕೆಟ್ ನಷ್ಟಕ್ಕೆ 209 ರನ್

Thu 10th Nov, 2016 Author: Kumar Prince Mukherjee

ರಾಜ್ ಕೋಟ್: ಭಾರತ ಪ್ರವಾಸದಲ್ಲಿರುವ ಇಂಗ್ಲೆಂಡ್ ತಂಡ ಟೀಂ ಇಂಡಿಯಾ ವಿರುದ್ಧದ ಐದು ಟೆಸ್ಟ್ ಸರಣಿಯ ಮೊದಲ ಪಂದ್ಯದ ಪ್ರಥಮ ಇನ್ನಿಂಗ್ಸ್ ನಲ್ಲಿ 64 ಓವರ್ ಮುಕ್ತಾಯಕ್ಕೆ 3 ವಿಕೆಟ್ ನಷ್ಟಕ್ಕೆ 204 ರನ್ ಗಳಿಸಿದೆ.  ರಾಜ್ ಕೋಟ್ ನ ಸೌರಾಷ್ಟ್ರ ಕ್ರಿಕೆಟ್ ಅಸೋಸಿಯೇಷನ್ ಕ್ರೀಡಾಂಗಣದಲ್ಲಿ ನಡೆಸುತ್ತಿರುವ ಪಂದ್ಯದಲ್ಲಿ ಟಾಸ್ ಗೆದ್ದ ಇಂಗ್ಲೆಂಡ್ ಬ್ಯಾಟಿಂಗ್ ಆಯ್ಕೆ ಮಾಡಿಕೊಂಡಿದ್ದು, ಪ್ರಥಮ ಇನ್ನಿಂಗ್ಸ್ ಪ್ರಾರಂಭಿಸಿದೆ. ಇಂಗ್ಲೆಂಡ್ ಪರ ಆರಂಭಿಕರಾದ ಅಲಸ್ಟೈರ್ ಕುಕ್ 21, ಹಸೀಬ್ ಹಮೀದ್ 31 ಹಾಗೂ ಬೆನ್ ಡಟೆಕ್ 13 ರನ್ ಗಳಿಸಿ ಔಟಾದರೆ, ಜೋ ರೂಟ್ ಅಜೇಯ 93 ಹಾಗೂ ಮೋಯಿನ್ ಅಲಿ ಅಜೇಯ 48 ರನ್ ಗಳಿಸಿ ಆಡುತ್ತಿದ್ದಾರೆ. ಭಾರತ ಪರ ಸ್ಪೀನ್ ಮಾಂತ್ರಿಕ ಆರ್ ಅಶ್ವಿನ್ 2 ವಿಕೆಟ್ ಪಡೆದಿದ್ದರೆ ರವೀಂದ್ರ ಜಡೇಜಾ 1 ವಿಕೆಟ್ ಪಡೆದಿದ್ದಾರೆ.